Thursday, July 16, 2026
Homeಪ್ರಮುಖ-ಸುದ್ದಿಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೊನಾ ಪಾಸಿಟಿವ್

ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಚೆನ್ನೈ : ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಸ್ವತಃ ಕಾರ್ತಿ ಚಿದಂಬರಂ ಸೋಮವಾರ ಟ್ವಿಟ್ಟರ್‌ನಲ್ಲಿ ಖಚಿತಪಡಿಸಿದ್ದು, ”ನನಗೆ ಕೊವಿಡ್ ಪಾಸಿಟಿವ್ ಬಂದಿದೆ. ಲಘು ಲಕ್ಷಣಗಳನ್ನು ಹೊಂದಿದ್ದೇನೆ” ಎಂದು ತಿಳಿಸಿದ್ದಾರೆ.

‘ನಾನು ಕೊರೊನಾ ವೈರಸ್‌ ಪಾಸಿಟಿವ್ ಹೊಂದಿದ್ದೇನೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದು ವೈದ್ಯರ ಸಲಹೆಯಂತೆ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ಇತ್ತೀಚಿಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಪ್ರೋಟೋಕಾಲ್ ಅನುಸರಿಸಿಲು ನಾನು ಒತ್ತಾಯಿಸುತ್ತೇನೆ” ಎಂದು ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಇತ್ತೀಚಿಗಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊವಿಡ್ ಸೋಂಕು ತಗುಲಿತ್ತು. ಭಾನುವಾರ ಸಂಜೆ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ದೃಢವಾಗಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಣ್ ಗೂ ಕೊವಿಡ್ ತಗುಲಿತ್ತು. ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಗೂ ಸೋಂಕು ಅಂಟಿಕೊಂಡಿದೆ.

- Advertisement -

Latest News

error: Content is protected !!