Thursday, June 4, 2026
Homeತಾಜಾ ಸುದ್ದಿಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವರ್ಗಾವಣೆ

ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವರ್ಗಾವಣೆ

- Advertisement -
- Advertisement -

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹನ್ನೊಂದು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಯ್ಕೆ ಶ್ರೇಣಿಯ ಕೆಎಎಸ್ ಅಧಿಕಾರಿ ಜಗದೀಶ್ ಕೆ. ನಾಯಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಮಹೇಶ್ ಚಂದ್ರ ಅವರನ್ನು ಉಡುಪಿ ಭೂ ನ್ಯಾಯ ಮಂಡಳಿ ವಿಶೇಷ ಸಹಾಯಕ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.

ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ವರ್ಗಾವಣೆಗೊಂಡಿರುವ ಅಧಿಕಾರಿಗಳು ಯಾವುದೇ ಚಲನಾದೇಶವಿಲ್ಲದೇ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗಳಲ್ಲೇ ಕಾರ್ಯ ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ.

ಇದೇ ವೇಳೆ ಆರು ಕೆಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದ್ದು, ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ವಿ. ಅಭಿಷೇಕ್ ಅವರನ್ನು ಹೊನ್ನಾಳಿ ಉಪ ವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!