Saturday, June 6, 2026
Homeಕರಾವಳಿಕಾಸರಗೋಡು: ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರನ್ ನಾಯರ್ ನಿಧನ

ಕಾಸರಗೋಡು: ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರನ್ ನಾಯರ್ ನಿಧನ

- Advertisement -
- Advertisement -

ಕಾಸರಗೋಡು: ಕಾಂಗ್ರೆಸ್ ಹಿರಿಯ ನಾಯಕ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ. ಗಂಗಾಧರನ್ ನಾಯರ್ (78) ನಿನ್ನೆ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ.

ಗಂಗಾಧರನ್ ನಾಯರ್ ಅವರು ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಯುಡಿಎಫ್ ಜಿಲ್ಲಾ ಸಂಚಾಲಕ, ಕೃಷಿ ಅಭಿವೃದ್ಧಿ ಬ್ಯಾಂಕ್, ಪೆರಿಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅವರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಬೆಳಗ್ಗೆ ಹುಟ್ಟೂರಾದ ಪೆರಿಯದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!