Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಕಾಸರಗೋಡು; ಕಾಸರಗೋಡು ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್, ಪತಿ ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಸ್‌ಬಿಐಯ ಕಾಸರಗೋಡು ಶಾಖೆಯ ಮ್ಯಾನೇಜರ್‌ ಶೀನಾ(35), ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಮೇಲೋಕಾಟಿಲ್‌ ಪರಂಬಿಲ್‌ ಸಬೀಶ್‌ (37), ಮಕ್ಕಳಾದ ಹರಿಗೋವಿಂದ್‌(6) ಮತ್ತು ಶ್ರೀವರ್ಧನ್‌(2) ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಬೀಶ್‌ ಮನೆಯ ಒಂದು ಕೊಠಡಿಯೊಳಗೆ ಹಾಗೂ ಶೀನಾ ಇನ್ನೊಂದು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸಬೀಶ್‌ ನೇಣು ಬಿಗಿದ ಕೊಠಡಿಯ ಹಾಸಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಕೆಳಗೆ ನೆಲದಲ್ಲಿ ಪತ್ತೆಯಾಗಿದೆ.

- Advertisement -

Latest News

error: Content is protected !!