Friday, June 5, 2026
Homeಕರಾವಳಿಕೊರೊನಾ ಮುಕ್ತವಾಗಿ ದೇಶಕ್ಕೆ ಮಾದರಿಯಾದ ಕಾಸರಗೋಡು ಜಿಲ್ಲೆ

ಕೊರೊನಾ ಮುಕ್ತವಾಗಿ ದೇಶಕ್ಕೆ ಮಾದರಿಯಾದ ಕಾಸರಗೋಡು ಜಿಲ್ಲೆ

- Advertisement -
- Advertisement -

ಕಾಸರಗೋಡು : ಕೊರೊನಾ ಸೋಂಕಿನ ಭೀತಿಗೆ ಕಾರಣವಾಗಿದ್ದ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಒರ್ವ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಕಾಸರಗೋಡು ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಈ ಮೂಲಕ ದೇಶಕ್ಕೆ ಮಾದರಿಯಾಗಿದೆ.

ಕೇರಳದ ಒಟ್ಟು 505 ಕೊರೊನಾ ಪ್ರಕರಣಗಳ ಪೈಕಿ ಕಾಸರಗೋಡು ಜಿಲ್ಲೆಯಲ್ಲಿ 179 ಜನರಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿತ್ತು. ಬಹುತೇಕರನ್ನು ಕಾಸರಗೋಡು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವರನ್ನು ಕಣ್ಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣಗಳು ದೃಢಪಟ್ಟಿಲ್ಲ.

- Advertisement -

Latest News

error: Content is protected !!