Monday, May 6, 2024
Homeಕರಾವಳಿಪೋಲೆಂಡ್ ದೇಶದ ಭಾರತೀಯ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ನೇಮಕ!

ಪೋಲೆಂಡ್ ದೇಶದ ಭಾರತೀಯ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ನೇಮಕ!

spot_img
- Advertisement -
- Advertisement -

ಮಂಗಳೂರು: ಪೋಲೆಂಡ್ ದೇಶದ ಭಾರತೀಯ ರಾಯಭಾರಿಯಾಗಿ ದ.ಕ.ಜಿಲ್ಲೆಯ ಗಡಿ ಪ್ರದೇಶವಾದ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ಎಂಬವರು ನೇಮಕಗೊಂಡಿದ್ದಾರೆ.

ಇವರು ಕಾಸರಗೋಡಿನ ಫೋರ್ಟ್ ರೋಡ್‌ನಲ್ಲಿ ವಾಸವಾಗಿದ್ದ ದಿ.ಮುಹಮ್ಮದ್ ಹಬೀಬುಲ್ಲಾ ಮತ್ತು ಝುಲು ಬಾನು ದಂಪತಿಯ ಪುತ್ರಿ.ಹಬೀಬುಲ್ಲಾ ಅವರು ಕೇಂದ್ರ ಸರಕಾರದ ಸಾಗರೋತ್ತರ ಸಂವಹನ ಇಲಾಖೆಯಲ್ಲಿ ಉದ್ಯೋಗಕ್ಕೆ ನಿಯುಕ್ತಿಗೊಂಡ ಬಳಿಕ ಕುಟುಂಬ ಸಮೇತ ಕಾಸರಗೋಡಿನಿಂದ ಹೊಸದಿಲ್ಲಿಗೆ ತೆರಳಿ ಅಲ್ಲಿಯೇ ವಾಸವಾಗಿದ್ದರು. ನಗ್ಮಾ ಅವರು ಹುಟ್ಟಿ ಬೆಳೆದಿದ್ದು ಹೊಸದಿಲ್ಲಿಯಲ್ಲಿ. ಸೈಂಟ್ ಸ್ಟೀಫನ್ಸ್ ಕಾಲೇಜು ಮತ್ತು ಹೊಸದಿಲ್ಲಿಯ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಅಧ್ಯಯನ ಮಾಡಿದ ಅವರು, ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.

ವಿದೇಶಾಂಗ ಇಲಾಖೆಯಲ್ಲಿ 1991ರಲ್ಲಿ ವೃತ್ತಿ ರಾಜತಾಂತ್ರಿಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಅವರು, ಪ್ಯಾರೀಸ್‌ನ ಯುನೆಸ್ಕೋ ಭಾರತೀಯ ಮಿಷನ್‌ಗೆ ಮೊದಲು ನೇಮಕಗೊಂಡರು. ನಂತರ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತುನಿಷಿಯಾ ಮತ್ತು ಬ್ರೂನಿ ದೇಶಗಳ ರಾಯಭಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಕಟ್ಮಂಡು, ಕೊಲಂಬೋ, ಬ್ಯಾಂಕಾಕ್ ಗಳ ಭಾರತೀಯ ರಾಯಭಾರ ಕಚೇರಿಗಳಲ್ಲೂ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಮಾಜಿ ಪ್ರಧಾನಮಂತ್ರಿಗಳಾದ ಐ.ಕೆ.ಗುಜ್ರಾಲ್‌ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸಿಬ್ಬಂದಿ ಅಧಿಕಾರಿಯಾಗಿದ್ದರು. ವಿದೇಶಾಂಗ ಇಲಾಖೆಯ ಶಿಷ್ಟಾಚಾರ ವಿಭಾಗದ ಉಪ ಮುಖ್ಯಸ್ಥೆಯಾದ ದೇಶದ ಪ್ರಥಮ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಯೂ ಇವರಿಗೆ ಸಲ್ಲುತ್ತದೆ. ಇವರು ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಅವರ ಸಹೋದರನ ಪುತ್ರಿಯೂ ಆಗಿದ್ದಾರೆ.

- Advertisement -
spot_img

Latest News

error: Content is protected !!