Wednesday, May 8, 2024
Homeತಾಜಾ ಸುದ್ದಿಯಾತ್ರಾರ್ಥಿಗಳಿಗೆ ಸಹಾಯಧನದಲ್ಲಿ ಕಾಶಿಯಾತ್ರೆ ಯೋಜನೆ : ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ

ಯಾತ್ರಾರ್ಥಿಗಳಿಗೆ ಸಹಾಯಧನದಲ್ಲಿ ಕಾಶಿಯಾತ್ರೆ ಯೋಜನೆ : ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು:ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ರಾಜ್ಯದ ಬಹುನಿರೀಕ್ಷಿತ ಕಾಶಿಯಾತ್ರೆ ಪ್ರವಾಸ ಯೋಜನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪವಾದ ಕಾಶಿಯಾತ್ರೆ ಪ್ರವಾಸ ಯೋಜನೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಇದು ದೇವಾಲಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶದ ವಾರಣಾಸಿಯ ಪುರಾತನ ಕಾಶಿಯ ಶ್ರೀ ವಿಶ್ವನಾಥ ಮಂದಿರವನ್ನು ವಿಶಿಷ್ಟ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಮೂಲಕ ಐತಿಹಾಸಿಕ ಕಾಶಿಗೆ ‘ದಿವ್ಯಕಾಶಿ-ಭವ್ಯಕಾಶಿ’ ಎಂಬ ಅಭಿದಾನ ದೊರೆಯುವಂತೆ ಮಾಡಿರುವ ಈ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಯಾತ್ರಾರ್ಥಿಗಳು ಭವ್ಯಕಾಶಿಗೆ ಭೇಟಿ ನೀಡಿ ಶ್ರೀ ವಿಶ್ವನಾಥನ ದರ್ಶನವನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕಾಶಿಯಾತ್ರೆ ಯೋಜನೆಯನ್ವಯ ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಬಹುದಾಗಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ ಈ ಯೋಜನೆಯನ್ವಯ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಶ್ರೀಮತಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಕುರಿತಂತೆ ಸರ್ಕಾರದ ಆದೇಶ ಹೊರಡಿಸಲಾಗಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುತ್ತದೆ.

- Advertisement -
spot_img

Latest News

error: Content is protected !!