Friday, March 29, 2024
Homeಕರಾವಳಿಆಡಿಯೋ ಕ್ಲಿಪ್ ನಂದಲ್ಲ: ತನಿಖೆಗೆ ಸಿಎಂಗೆ ಮನವಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಆಡಿಯೋ ಕ್ಲಿಪ್ ನಂದಲ್ಲ: ತನಿಖೆಗೆ ಸಿಎಂಗೆ ಮನವಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

spot_img
- Advertisement -
- Advertisement -

ಮಂಗಳೂರು: ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಇದರ ಜೊತೆಗೆ ಟ್ವೀಟ್ ಮೂಲಕವೂ ಬಹಿರಂಗಗೊಂಡಿರುವ ಆಡಿಯೋ ಕ್ಲಿಪ್ ನಲ್ಲಿರುವ ಧ್ವನಿ ತಮ್ಮದಲ್ಲ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಬಿಜೆಪಿ ಬೆಳವಣಿಗೆಗಳ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಕ್ಲಿಪ್ ರಾಜ್ಯ ಬಿಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

- Advertisement -
spot_img

Latest News

error: Content is protected !!