Sunday, August 30, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ನೀಡಿದ್ದಾರೆ. ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.


ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸರ್ಪ ಸಂಸ್ಕಾರ ಸೇವೆಯನ್ನು ನಟಿ ಕತ್ರಿನಾ ಕೈಫ್ ನೆರವೇರಿಸಲಿದ್ದಾರೆ. ಸಂತಾನ ಭಾಗ್ಯಕ್ಕಾಗಿ ಕತ್ರೀನಾ ಸರ್ಪ ಸಂಸ್ಕಾರ ನೆರವೇರಿಸಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!