Wednesday, September 30, 2026
Homeಕರಾವಳಿಉಡುಪಿಕಾಪು ಫ್ಲೈಓವರ್ ಮೇಲೆ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ...

ಕಾಪು ಫ್ಲೈಓವರ್ ಮೇಲೆ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಂದೂವರೆ ವರ್ಷದ ಹಸುಗೂಸು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಚ್ಚಿಲ ನಿವಾಸಿ ಸಂಧ್ಯಾ ಎಂಬುವವರ ಪುತ್ರ ಸುವಿತ್ (1.5 ವರ್ಷ) ಮೃತಪಟ್ಟ ದುರ್ದೈವಿ.

ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ, ರಸ್ತೆ ಬದಿಯ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿದ್ದ ಕಾಪು ಪುರಸಭೆಯ ಟೆಂಪೋಗೆ ಹಿಂಬದಿಯಿಂದ ಭೀಕರವಾಗಿ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಯಾನ್ ಮತ್ತು ಸುವಿತ್ ಗಾಯಗೊಂಡಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಸುವಿತ್‌ನನ್ನು ಉಡುಪಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಮಗು ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದೆ. ಘಟನೆಗೆ ಸಂಬಂಧಿಸಿದಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!