Saturday, June 27, 2026
Homeಕರಾವಳಿಉಡುಪಿವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕಾಪು ಗುಜರಿ ಅಂಗಡಿ ಸ್ಫೋಟ ಪ್ರಕರಣ

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕಾಪು ಗುಜರಿ ಅಂಗಡಿ ಸ್ಫೋಟ ಪ್ರಕರಣ

- Advertisement -
- Advertisement -

ಬೆಂಗಳೂರು: ಕಾಪು ತಾಲೂಕಿನ ಫಕೀರನಕಟ್ಟೆಯ ಗುಜರಿ ಅಂಗಡಿಯಲ್ಲಿ ನಿನ್ನೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಕಾಪು ಶಾಸಕ ಲಾಲಾಜಿ ಮೆಂಡನ್ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ.

ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರದಿಂದ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಶಾಸಕ ಲಾಲಾಜಿ ಮೆಂಡನ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.ಸ್ಫೋಟ ಪ್ರಕರಣದ ಕುರಿತು ವರದಿ ಪಡೆದು ನಂತರ ಉತ್ತರ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ನಿನ್ನೆ ನಡೆದ ಸ್ಫೋಟ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿ ನಾಲ್ಕು ಜನ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!