Saturday, April 20, 2024
Homeತಾಜಾ ಸುದ್ದಿಉಡುಪಿ: ಖ್ಯಾತ ಸಾಹಿತಿ, ಬರಹಗಾರ್ತಿ ಮುಮ್ತಾಜ್ ಬೇಗಂ ವಿಧಿವಶ

ಉಡುಪಿ: ಖ್ಯಾತ ಸಾಹಿತಿ, ಬರಹಗಾರ್ತಿ ಮುಮ್ತಾಜ್ ಬೇಗಂ ವಿಧಿವಶ

spot_img
- Advertisement -
- Advertisement -

ಕಾಪು: ಕಳೆದ ಐದು ದಶಕಗಳಿಂದ ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿ ಅಪ್ರತಿಮ‌ ಸಾಧನೆಗೈದಿದ್ದ ಮಮ್ತಾಜ್ ಬೇಗಂ (73 ವ) ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂಲತಃ ಬೆಳಪು ಮಿಲಿಟರಿ ಕಾಲೊನಿ ನಿವಾಸಿಯಾಗಿರುವ ಇವರು ಪ್ರಸ್ತುತ ಗುಜರಾತ್ ನಲ್ಲಿ‌ ವೈದ್ಯೆಯಾಗಿರುವ ಮಗಳ ಜೊತೆಗಿದ್ದರು. ಅವರು ಬರೆದಿದ್ದ ಸೂರ್ಯಾಸ್ತ ಪುಸ್ತಕದ ಬಿಡುಗಡೆಗಾಗಿ ಕೆಲದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ಕೋವಿಡ್ ಪಾಸಿಟಿವ್ ಗೆ ಸಿಲುಕಿ, ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇವರು ಅವ್ಯಕ್ತ, ಪರದೇಶಿ, ವರ್ತುಲ, ಬಂದಳಿಕೆ, ಚಿಂಪಿ, ಸರ್ವ ಋತುಗಳೂ ನಿನಗಾಗಿ, ಅಂಕುರ, ಪರದೇಶಿ ಸಹಿತ ಹಲವಾರು ಕಥೆ, ಕವನ, ಕಾದಂಬರಿ ಸಹಿತ ವಿವಿಧ ಪುಸ್ತಕಗಳನ್ನು ಬರೆದಿದ್ದರು.

ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿನ ಸಾಧನೆಗಾಗಿ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಮೇವುಂಡಿ ಮಲ್ಲಾರಿ ಮಕ್ಕಳ‌ ಕಥಾ ಪುರಸ್ಕಾರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ, ಹಿರಿಯ ನಾಗರಿಕರ ಸಾಹಿತ್ಯ ಪ್ರಶಸ್ತಿ, ಬಸವ ಸಾಹಿತ್ಯ ಕಲಾವೇದಿಕೆಯ ಬಸವ ಜ್ಯೋತಿ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದರು.

ಮೃತರು ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮುಮ್ತಾಜ್ ಬೇಗಂ ಅವರ ನಿಧನಕ್ಕೆ ಶಾಸಕ ಲಾಲಾಜಿ‌ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಹಿತ ಕಲೆ, ಸಾಹಿತ್ಯ ಮತ್ತು ಬರಹ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!