Monday, April 29, 2024
Homeತಾಜಾ ಸುದ್ದಿಸ್ಯಾಂಡಲ್ ವುಡ್ ನ ಹೆಸರಾಂತ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ ಕೆಸಿಎನ್ ಮೋಹನ್ ನಿಧನ

ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ ಕೆಸಿಎನ್ ಮೋಹನ್ ನಿಧನ

spot_img
- Advertisement -
- Advertisement -

ಬೆಂಗಳೂರು; ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ, ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕ ಕೆಸಿಎನ್ ಮೋಹನ್ ನಿಧನರಾಗಿದ್ದಾರೆ.

ಸ್ಯಾಂಡಲ್‌ವುಡ್‌ ಹಲವು ಸಿನಿಮಾಗಳನ್ನು ನಿರ್ಮಿಸಿದ್ದ, ಪ್ರದರ್ಶಕರಾಗಿಯೂ ಗುರುತಿಸಿಕೊಂಡಿದ್ದ ಕೆಸಿಎನ್ ಮೋಹನ್ ಅವರು ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ಹುಷಾರಾಗಿ ಮನೆಗೆ ಮರಳಿದ್ದರು. ಆದರೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವಿನ ಕಾರಣದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಈ ಬಾರಿ ಚಿಕಿತ್ಸೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!