ಗೋವಾ: ದಕ್ಷಿಣಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ 15 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆಯೊತ್ತಿದ್ದಾರೆ. ತನ್ನ ಬಾಲ್ಯದ ಗೆಳೆಯ ಆಂಟನಿ ತಟ್ಟಿಲ್ ಅವರನ್ನು ಕೀರ್ತಿ ಸುರೇಶ್ ಮದುವೆಯಾಗಿದ್ದಾರೆ. ಗೋವಾದಲ್ಲಿ ನಡೆದ ಡೆಸ್ಟಿನೇಷನ್ ವೆಡ್ಡಿಂಗ್ನಲ್ಲಿ ಆಂಟನಿ ತಟ್ಟಿಲ್ ಹಾಗೂ ಸ್ಟಾರ್ ನಟಿ ಕೀರ್ತಿ ಸುರೇಶ್ ಸತಿ ಪತಿಗಳಾಗಿದ್ದಾರೆ.
ಆಂಟನಿ ತಟ್ಟಿಲ್ ನಟಿ ಕೀರ್ತಿ ಸುರೇಶ್ ತಮ್ಮ ಬಾಲ್ಯದ ಗೆಳೆಯ. ಇಬ್ಬರು ಕ್ಲಾಸ್ಮೇಟ್ಸ್ ಮತ್ತು 15 ವರ್ಷಗಳ ಗೆಳೆತನ. ಒಟ್ಟಿಗೆ ಹೈಸ್ಕೂಲ್ನಲ್ಲಿ ಓದಿದ್ರು. ಇದು ಹಲವು ವರ್ಷಗಳಿಂದ ಈ ಇಬ್ಬರು ಪ್ರೀತಿ ಮಾಡುತ್ತಿದ್ದರು. ಕುಟುಂಬಸ್ಥರ ಒಪ್ಪಿಗೆ ಮೆರೆಗೆ ನಟಿ ಕೀರ್ತಿ ಸುರೇಶ್ ಹಾಗೂ ಆಂಟೊನಿ ತಟ್ಟಿಲ್ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಗೋವಾದಲ್ಲಿ ನಡೆದ ಡೆಸ್ಟಿನೇಷನ್ ವೆಡ್ಡಿಂಗ್ನಲ್ಲಿ ಆಂಟನಿ ತಟ್ಟಿಲ್ ಕೀರ್ತಿ ಸುರೇಶ್ಗೆ ಕುಟುಂಬಸ್ಥರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನವ ದಂಪತಿಗೆ ಸದ್ಯ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.