Thursday, June 4, 2026
Homeಅಪರಾಧಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ , ತಾಲಿಬಾನ್ ಸಂಸ್ಕೃತಿ ಸಲ್ಲದು ,...

ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ , ತಾಲಿಬಾನ್ ಸಂಸ್ಕೃತಿ ಸಲ್ಲದು , ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕೇಮಾರು ಶ್ರೀ

- Advertisement -
- Advertisement -

ಪುತ್ತೂರು : ಇತ್ತೀಚಿಗೆ ಪುತ್ತೂರಿನಲ್ಲಿ ಬಡ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಎಷ್ಟು ಮಾತ್ರಕ್ಕೂ ಸಹಿಸಲು ಸಾಧ್ಯವಿಲ್ಲ . ನೊಂದವರಿಗೆ ನ್ಯಾಯ ಒದಗಿಸಬೇಕಾದ ಪೊಲೀಸರು ಒತ್ತಡಕ್ಕೆ ಮಣಿದು ಬಡ ಯುವಕರ ಮೇಲೆ ದೌರ್ಜನ್ಯ ನಡೆಸಿದ್ದು ತಾಲಿಬಾನ್ ಸಂಸೃತಿಯಾಗಿದೆ .


ವ್ಯಕ್ತಿ ತಪ್ಪು ಮಾಡಿದಲ್ಲಿ ದೇಶದ ಸಂವಿಧಾನ ನೀಡಿದ ಕಾನೂನು ಚೌಕಟ್ಟಿನಲ್ಲಿ ವಿಚಾರಣೆ ಮಾಡಬೇಕೆ ಹೊರತು ಈ ರೀತಿ ಅಮಾನವೀಯವಾಗಿ ಬಡವರ ಮೇಲೆ ಪೊಲೀಸ್ ದೌರ್ಜನ್ಯ ನಡೆಸುವುದು ಮಾನವ ಹಕ್ಕು ಉಲ್ಲಂಘನೆ ಮತ್ತು ತಾಲಿಬಾನ್ ಸಂಸೃತಿಯಾಗಿದೆ ಎಂದು ಕೇಮಾರು ಶ್ರೀ ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಅವರು ತಿಳಿಸಿದರು.


ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳದೇ ಹೋದಲ್ಲಿ ಹಿಂದೂ ಸಂಘಟನೆಗಳನ್ನು ಒಟ್ಟು ಸೇರಿಸಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ತಯಾರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -

Latest News

error: Content is protected !!