Thursday, June 4, 2026
Homeತಾಜಾ ಸುದ್ದಿಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ...

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

- Advertisement -
- Advertisement -

ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84)  ನಿಧನರಾಗಿದ್ದಾರೆ.ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.


ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.

ಕೆಂಪಣ್ಣ ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು.ಕಾಂಗ್ರೆಸ್ ಆಡಳಿತದಲ್ಲೂ ಶೇ 40ರ ಕಮಿಷನ್ ಮುಂದುವರಿದಿದೆ ಎಂದು ಕೆಂಪಣ್ಣ ಇದೇ ವರ್ಷ ಫೆಬ್ರವರಿಯಲ್ಲಿ ಆರೋಪಿಸಿದ್ದರು.

- Advertisement -

Latest News

error: Content is protected !!