Monday, April 29, 2024
Homeಕರಾವಳಿಕೇರಳ; 8 ವರ್ಷದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ 90 ವರ್ಷ ಜೈಲು...

ಕೇರಳ; 8 ವರ್ಷದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ 90 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ಕೋರ್ಟ್

spot_img
- Advertisement -
- Advertisement -

ಕೇರಳ:ಕಣ್ಣೂರಿನ ಪಯ್ಯನ್ನೂರಿನಲ್ಲಿ ತನ್ನ  8 ವರ್ಷದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ ತಳಿಪರಂಬದ ತ್ವರಿತ ನ್ಯಾಯಾಲಯ 90 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂ.ದಂಡ ವಿಧಿಸಿ ವಿಶೇಷ ತೀರ್ಪು ನೀಡಿದೆ.

2018ರಲ್ಲಿ ಪಯ್ಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ರಾಜೇಶ್ ಅವರು 44 ವರ್ಷದ ವ್ಯಕ್ತಿಯನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.ಐಪಿಸಿಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಅಡಿ 10 ವರ್ಷ ಜೈಲು ಶಿಕ್ಷೆ, ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 3 (ಎ), 5 (ಎಲ್), (ಎಂ), ಮತ್ತು (ಎನ್) ಅಡಿ ತಲಾ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಶಿಕ್ಷೆಯು ಏಕಕಾಲದಲ್ಲಿ ನಡೆಯುವುದರಿಂದ ಅವರು ಕೇವಲ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದರೆ ಸಾಕು ಎಂದು ಹೇಳಲಾಗಿದೆ.ಇನ್ನು 2018ರ ಜುಲೈ 26ರಂದು ಘಟನೆ ನಡೆದಿತ್ತು.ಎಂಟು ವರ್ಷದ ಮಗನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಅಂದಿನ ಪಯ್ಯನೂರು ಎಸ್‌ಐ ಕೆ.ಪಿ.ಶೈನ್ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.


ನಂತರ ಪಯ್ಯನ್ನೂರು ಪೊಲೀಸ್ ಇನ್ಸ್ ಪೆಕ್ಟರ್ ಕೆ.ವಿನೋದ್ ಕುಮಾರ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯವು ಐದು ಸೆಕ್ಷನ್‌ಗಳಲ್ಲಿ 90 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂಪಾಯಿ ದಂಡ ವಿಧಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶೆರಿಮೋಲ್ ಜೋಸ್ ವಾದ ಮಂಡಿಸಿದ್ದರು.

- Advertisement -
spot_img

Latest News

error: Content is protected !!