Thursday, June 4, 2026
Homeಉತ್ತರ ಕನ್ನಡಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಕೇರಳದ ಲಾರಿ ಚಾಲಕ ಅರ್ಜುನ್ ನಾಪತ್ತೆ; ಪತ್ತೆಗಾಗಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ...

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಕೇರಳದ ಲಾರಿ ಚಾಲಕ ಅರ್ಜುನ್ ನಾಪತ್ತೆ; ಪತ್ತೆಗಾಗಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

- Advertisement -
- Advertisement -

ಉತ್ತರಕನ್ನಡದ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಅವರ ಹುಡುಕಾಟ ತೀವ್ರಗೊಳಿಸಲು ಕೇಂದ್ರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿ ಕೇರಳ‌ ಮೂಲದ ವಕೀಲ ಕೆ. ಆರ್. ಸುಭಾಷ್ ಚಂದ್ರನ್ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಲಾರಿ ಚಾಲಕ ಅರ್ಜುನನ ಹುಡುಕಾಟ ತೀವ್ರಗೊಳಿಸಲು ಕೇಂದ್ರ ತಕ್ಷಣ ಪಿಐಎಲ್ ಸಲ್ಲಿಸಿದ್ದು, ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಮುಂದೆ ಅರ್ಜಿ ಮಂಡಿಸಲು ಸುಪ್ರೀಂಕೋರ್ಟ್ ರಿಜಿಸ್ಟ್ರಿ ಅನುಮತಿ ನೀಡಿದೆ. 

ಕೇರಳ ಮೂಲದ ಅರ್ಜುನ ಜುಲೈ 22ರಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು. ಅರ್ಜುನ (34), ಕೃಷ್ಣಪ್ರಿಯಾ (24) ಪ್ರೀತಿಸಿ ವಿವಾಹವಾಗಿದ್ದರು. ಅರ್ಜುನ ಪತ್ನಿ ಕೃಷ್ಣಪ್ರಿಯಾ 6 ತಿಂಗಳ ಮಗುವಿನ ಜೊತೆ ಪತಿಯ ಬರುವಿಕೆಗಾಗಿ ಕಾದು ಕುಳಿತಿದ್ದಾರೆ. ಜೋಯಿಡಾದಿಂದ ಕೇರಳಕ್ಕೆ ಹೊರಟಿದ್ದ ಅರ್ಜುನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾದ ಬಳಿಕ ನಾಪತ್ತೆಯಾಗಿದ್ದಾರೆ. ಚೆನ್ನಾಗಿ ದುಡಿದು ಸಹೋದರಿ ವಿವಾಹ ಮಾಡಬೇಕು, ಹೊಸದಾದ ಮನೆ ಕಟ್ಟಿ ಆನಂದದಿಂದ ಜೀವನ ಸಾಗಿಸಬೇಕು ಎಂದು ಕನಸು ಕಂಡಿದ್ದ ಅರ್ಜುನ ಪರಿಸ್ಥಿತಿ ಹೇಗಿದೆ? ಎಂಬ ಮಾಹಿತಿ ಸದ್ಯಕ್ಕೆ ಇಲ್ಲ. ಅರ್ಜುನ ಚಾಲನೆ ಮಾಡುತ್ತಿದ್ದ ಲಾರಿಯ ಮೇಲೆ ಸುಮಾರು 60 ಟನ್ ಮಣ್ಣು ಬಿದ್ದಿದೆ. ಆದರೆ ಅವರ ಮೊಬೈಲ್ ರಿಂಗ್ ಆಗುತ್ತಿದೆ. ಬೇಗ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಸಿದರೆ ಅರ್ಜುನ ಬದುಕುತ್ತಾರೆ ಎಂದು ಅವರ ಕುಟುಂಬದವರು ಒತ್ತಾಯಿಸಿದ್ದಾರೆ

- Advertisement -

Latest News

error: Content is protected !!