Wednesday, February 12, 2025
Homeಉತ್ತರ ಕನ್ನಡ73 ದಿನದ ಬಳಿಕ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

73 ದಿನದ ಬಳಿಕ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

spot_img
- Advertisement -
- Advertisement -

ಉತ್ತರಕನ್ನಡ : ಅಂಕೋಲಾ ಬಳಿ ಶಿರೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ನ ಮೃತದೇಹವನ್ನು ದುರಂತ ನಡೆದ ಬರೋಬ್ಬರಿ 73 ದಿನಗಳ ಬಳಿಕ  ಮರಣೋತ್ತರ ಪರೀಕ್ಷೆ ನಡೆಸಿ ನಿನ್ನೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕಾರವಾರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೇರಳ ಮೂಲದ ಚಾಲಕ ಅರ್ಜುನ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ದಿನಗಳ ಹಿಂದೆ ಗಂಗಾವಳಿ ನದಿಯಲ್ಲಿ ಚಾಲಕ ಅರ್ಜುನ್ ಹಾಗೂ ಆತನ ಲಾರಿ ಪತ್ತೆಯಾಗಿತ್ತು . ಇದೀಗ ಮೃತ ದೇಹವನ್ನು ವೈದ್ಯರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು, ಜಿಲ್ಲಾಡಳಿತದಿಂದ ಪ್ರಕೃತಿ ವಿಕೋಪದ ಅಡಿ 5 ಲಕ್ಷ ಪರಿಹಾರ ವಿತರಿಸಲಾಗಿದೆ

- Advertisement -
spot_img

Latest News

error: Content is protected !!