Sunday, May 5, 2024
Homeತಾಜಾ ಸುದ್ದಿಕೇರಳ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ತಲೆ ಬೋಳಿಸಿಕೊಂಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ!

ಕೇರಳ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ತಲೆ ಬೋಳಿಸಿಕೊಂಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ!

spot_img
- Advertisement -
- Advertisement -

ತಿರುವಂತಪುರ: ಕೇರಳದ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿದೆ. ಮಹಿಳಾ ಕಾಂಗ್ರೆಸ್​ ಘಟಕದ ಅಧ್ಯಕ್ಷೆಯ ಹೆಸರನ್ನೂ ಪಕ್ಷ ಕೈ ಬಿಟ್ಟಿದೆ. ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷೆ ಲತಿಕಾ ಸುಭಾಷ್ ಅವರು ತಮ್ಮ ತಲೆಯನ್ನು ಬೋಳಿಸಿಕೊಂಡಿರುವ ಘಟನೆ ನಡೆದಿದೆ.

ಲತಿಕಾ ಸುಭಾಷ್​ ಅವರು ಎತ್ತುಮನೂರ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯಲು ಬಯಸಿದ್ದರಂತೆ. ಪಕ್ಷ ಆಕೆಯ ಬಯಕೆಯನ್ನು ಈಡೇರಿಸುವ ನಂಬಿಕೆಯನ್ನೂ ಇಟ್ಟುಕೊಂಡಿದ್ದರಂತೆ. ಆದರೆ ಅದು ಹುಸಿಯಾಗಿದೆ. ಕಾಂಗ್ರೆಸ್​ ಲತಿಕಾಗೆ ಟಿಕೆಟ್​ ನಿರಾಕರಿಸಿದೆ. ಇದರಿಂದಾಗಿ ಮನನೊಂದಿರುವ ಲತಿಕಾ ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿ, ಅಲ್ಲಿಯೇ ಅವರು ತಮ್ಮ ತಲೆಯನ್ನು ಬೋಳಿಸಿಕೊಂಡು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಮಹಿಳೆಯರನ್ನು ನಿರ್ಲಕ್ಷಿಸಲಾಗಿದೆ. ಹಲವು ವರ್ಷಗಳಿಂದ ಶ್ರಮ ಹಾಕಿ ದುಡಿದ ನಮ್ಮಂತವರನ್ನು ಲೆಕ್ಕದಲ್ಲಿ ಇಟ್ಟುಕೊಂಡಿಲ್ಲ ಎಂದು ಅವರು ದೂರಿದ್ದಾರೆ. ನಾನು ಬೇರಾವುದೇ ಪಕ್ಷವನ್ನು ಸೇರಿಕೊಳ್ಳುವುದಿಲ್ಲ. ಪಕ್ಷೇತರ ಸ್ಫರ್ದಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!