Friday, April 19, 2024
Homeಕರಾವಳಿತಲಪಾಡಿಯಲ್ಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಕ್ಕೆ ವಿರೋಧ: ಕೇರಳ ಎಸ್ ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

ತಲಪಾಡಿಯಲ್ಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಕ್ಕೆ ವಿರೋಧ: ಕೇರಳ ಎಸ್ ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

spot_img
- Advertisement -
- Advertisement -

ಮಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ
ದಕ್ಷಿಣ ಕನ್ನಡ – ಕೇರಳ ಗಡಿಯ ತಲಪಾಡಿಯಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಗಡಿಯಲ್ಲಿ ಪ್ರವೇಶವಿಲ್ಲದ ಕಾರಣ ಕರ್ನಾಟಕ ಸರಕಾರದ ಆದೇಶ ವಿರೋಧಿಸಿ ಕೇರಳಿಗರಿಂದ ಪ್ರತಿಭಟನೆ ನಡೆದಿದೆ. ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೇರಳದ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತಲಪಾಡಿ ಗಡಿಯಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದ್ದು, ಮಂಗಳೂರಿನಿಂದ ಕೇರಳದ ಕಡೆ ಸಾಗುವ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಸರಕಾರ ಕೂಡಲೇ ತನ್ನ ಆದೇಶವನ್ನು ವಾಪಸ್ ಪಡೆಯಬೇಕೆಂದು ಎಸ್ ಡಿಪಿಐ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಕೂಡಾ 72 ಗಂಟೆಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕರ್ನಾಟಕ ಸರ್ಕಾರ ಕಡ್ಡಾಯಗೊಳಿಸಿದೆ.

- Advertisement -
spot_img

Latest News

error: Content is protected !!