Thursday, June 4, 2026
Homeಕರಾವಳಿಮಂಗಳೂರುಉಳ್ಳಾಲದಲ್ಲಿ ಮನೆ ಕುಸಿತದಲ್ಲಿ ನಾಲ್ವರ ದುರ್ಮರಣ; ಘಟನಾ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಮಾಜಿ...

ಉಳ್ಳಾಲದಲ್ಲಿ ಮನೆ ಕುಸಿತದಲ್ಲಿ ನಾಲ್ವರ ದುರ್ಮರಣ; ಘಟನಾ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ

- Advertisement -
- Advertisement -

ಉಳ್ಳಾಲ: ಮಳೆಯಿಂದಾಗಿ ಕುತ್ತಾರು ಮದನಿ ನಗರದಲ್ಲಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌

ಮಂಗಳೂರು ಶಾಸಕರೂ ಅಗಿರುವ ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಅನಾಹುತದ ಬಗ್ಗೆ ಮಾಹಿತಿ ಪಡೆದರು.ಇದೇ ವೇಳೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸ್ಪೀಕರ್, ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಿದರು.

ದುರ್ಘಟನೆ ನಡೆದ ಸ್ಥಳದಲ್ಲಿ ಇನ್ನೂ ಒಂದು ಮನೆ ಅಪಾಯದ ಸ್ಥಿತಿಯಲ್ಲಿದ್ದು, ಸ್ಥಳಾಂತರದ ಬಗ್ಗೆ ಅಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದು, ತಾತ್ಕಾಲಿಕವಾಗಿ ಮರಳು ಚೀಲಗಳನ್ನು ಹಾಕುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ಮೃತಪಟ್ಟ ನಾಲ್ವರ ಮೃತದೇಹಗಳನ್ನೂ ಹೊರ ತೆಗೆಯಲಾಗಿದ್ದು, ಅಗ್ನಿಶಾಮಕ ದಳ, ಎಸ್ ಡಿಆರ್ ಎಫ್ ಮತ್ತು ಸ್ಥಳೀಯರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ‌

- Advertisement -

Latest News

error: Content is protected !!