Friday, May 17, 2024
Homeತಾಜಾ ಸುದ್ದಿಮೋದಿ ವಿಷದ ಹಾವು ಇದ್ದಂತೆ, ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ;...

ಮೋದಿ ವಿಷದ ಹಾವು ಇದ್ದಂತೆ, ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ; ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ ಖರ್ಗೆ

spot_img
- Advertisement -
- Advertisement -

ಬೆಂಗಳೂರು: ಮೋದಿ ವಿಷದ ಹಾವು ಇದ್ದಂತೆ, ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಾತಿಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.

ಈ ಹಿಂದೆ ಮೋದಿಯನ್ನು ನರಹಂತಕ ಎಂದು ಹೇಳಿದ್ದ ಖರ್ಗೆ ಅವರು ಇದೀಗ ಮೋದಿ ವಿಷದ ಹಾವು ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿಕೊಂಡಿದ್ದಾರೆ. ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಖರ್ಗೆ, ತಾನು ಮೋದಿಗೆ ಹೇಳಿಲ್ಲ, ಬಿಜೆಪಿಗೆ ಹೇಳಿದ್ದು ಎಂಬ ಸ್ಪಷ್ಟನೆ ನೀಡಿದ್ದರು. ಆದರೂ ಬಿಜೆಪಿ ನಾಯಕರ ಟೀಕೆಗೆ ಜಗ್ಗಿದ ಖರ್ಗೆ, ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ಕ್ಷಮೆ ಇರಲಿ ಎಂದರು. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಂಡು ನೋವಾಗಿದ್ದರೆ ವಿಷಾದ ಇರಲಿ. ಯಾವುದೇ ವ್ಯಕ್ತಿಯ ಬಗ್ಗೆ ಮಾತನಾಡುವುದಾಗಲಿ ಅಥವಾ ಯಾರಿಗೂ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ಬಿಜೆಪಿ-ಕಾಂಗ್ರೆಸ್ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಿದ್ಧಾಂತ ವಿಷಕಾರಿಯಾಗಿದೆ ಎಂದಿದ್ದಾರೆ..

- Advertisement -
spot_img

Latest News

error: Content is protected !!