Sunday, June 7, 2026
Homeತಾಜಾ ಸುದ್ದಿಅರ್ಧಕ್ಕೆ ನಿಂತ ಬಿಗ್​ ಬಾಸ್​ ಸೀಸನ್​ 8: ಎಲ್ಲ ಸ್ಪರ್ಧಿಗಳೂ ಮನೆಗೆ ವಾಪಸ್ಸು

ಅರ್ಧಕ್ಕೆ ನಿಂತ ಬಿಗ್​ ಬಾಸ್​ ಸೀಸನ್​ 8: ಎಲ್ಲ ಸ್ಪರ್ಧಿಗಳೂ ಮನೆಗೆ ವಾಪಸ್ಸು

- Advertisement -
- Advertisement -

ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕನ್ನಡದ ಬಿಗ್‌ ಬಾಸ್‌ ಶೋ ಅರ್ಧಕ್ಕೆ ಸ್ಥಗಿತವಾಗಿದ್ದು, ನಾಳೆ ಎಲ್ಲ ಸ್ಪರ್ಧಿಗಳೂ ಮನೆಗೆ ವಾಪಸ್ಸು ಆಗಲಿದ್ದಾರೆ.

ಈ ಬಗ್ಗೆ ಪರಮೇಶ್‌ ಗುಂಡ್ಕಲ್‌ ಅವರು ತಮ್ಮ ಫೇಸ್‌ ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದು, ಅವ ರು ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್‍ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ.

ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ. ಅಂತ ಹೇಳಿಕೊಂಡಿದ್ದಾರೆ.

- Advertisement -

Latest News

error: Content is protected !!