Thursday, June 4, 2026
Homeತಾಜಾ ಸುದ್ದಿಇಂದು ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸಾಧ್ಯತೆ

ಇಂದು ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಬೆಂಗಳೂರು : ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಬಹು ದಿನಗಳಿಂದ ಸುದ್ದಿಗಳು ಹರಿದಾಡುತ್ತಲೇ ಇದೆ. ಇತ್ತೀಚೆಗೆ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಕೂಡ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಮಧ್ಯಾಹ್ನ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಎಲ್ಲ ರಾಜೀಯ ಪಕ್ಷಗಳ ಮುಖಂಡರೊಂದಿಗೆ ಆತ್ಮೀಯ ಸಂಬಂಧ ಇರಿಸಿಕೊಂಡಿರುವ ಸುದೀಪ್ ಅವರು ನಿರ್ದಿಷ್ಟವಾಗಿ ಒಂದು ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳುವ ಅನುಮಾನವೂ ಇತ್ತು ಅಂತಿಮವಾಗಿ ಸುದೀಪ್ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸುದೀಪ್ ಅವರು ಬಿಜೆಪಿ ಸೇರ್ಪಡೆಯಾದರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ತಮ್ಮ ಪರಮಾಪ್ತ ಜಾಕ್ ಮಂಜು ಅವರನ್ನು ಚಿಕ್ಕಪೇಟೆಯಿಂದ ಕಣಕ್ಕಿಳಿಸಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.ಆದರೆ ಇದು ಎಷ್ಟರ ಮಟ್ಟಿಗೆ ನಿಜ ಅನ್ನೋದಕ್ಕೆ ವರೇ ಉತ್ತರ ನೀಡಬೇಕಿದೆ.

- Advertisement -

Latest News

error: Content is protected !!