Wednesday, July 15, 2026
Homeತಾಜಾ ಸುದ್ದಿಬಿಗ್ ಬಾಸ್ ಫಿನಾಲೆ ಬಳಿಕ ಬಿಗ್ ಬಾಸ್ ಶೋ ನಿರೂಪಣೆಗೆ ಕಿಚ್ಚ ವಿದಾಯ; ಭಾವುಕ ಪೋಸ್ಟ್...

ಬಿಗ್ ಬಾಸ್ ಫಿನಾಲೆ ಬಳಿಕ ಬಿಗ್ ಬಾಸ್ ಶೋ ನಿರೂಪಣೆಗೆ ಕಿಚ್ಚ ವಿದಾಯ; ಭಾವುಕ ಪೋಸ್ಟ್ ಹಂಚಿಕೊಂಡ ಸುದೀಪ್

- Advertisement -
- Advertisement -

ಬೆಂಗಳೂರು: ಣುಂದಿನ ಭಾನುವಾರ ಬಿಗ್ ಬಾಸ್ ಸೀಸನ್ 11ರ ಫಿನಾಲೆ ನಡೆಯಲಿದೆ. ಅದು ಕಿಚ್ಚ ಸುದೀಪ್ ಅವರ ನಿರೂಪಣೆಯ ಕೊನೆಯ ಎಪಿಸೋಡ್. ಹಾಗಾಗಿ ಇದೀಗ ಭಾವುಕ ಪೋಸ್ಟ್  ಹಾಕಿದ್ದಾರೆ.

ಈ ಬಗ್ಗೆ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಗ್ ಬಾಸ್ ಬಗ್ಗೆ ಭಾವುಕ ಮಾತುಗಳನ್ನು ಆಡಿದ್ದಾರೆ. ಬಿಗ್ ಬಾಸ್‌ನ ಕಳೆದ ಎಲ್ಲ 11 ಸೀಸನ್‌ಗಳನ್ನು ನಾನು ತುಂಬಾ ಆನಂದಿಸಿದ್ದೇನೆ. ನನ್ನ ಮೇಲೆ ಪ್ರೀತಿ ಇಟ್ಟು ನನ್ನನ್ನು ಬೆಂಬಲಿಸಿದ ನಿಮ್ಮೆಲ್ಲರಿಗೂ ನಾನು ಅಭಾರಿಯಾಗಿದ್ದೇನೆ. ಈ ಸೀಸನ್‌ನ ಫಿನಾಲೆಯೇ ನನ್ನ ಬಿಗ್‌ಬಾಸ್‌ನ ಕೊನೆ ಹೆಜ್ಜೆ ಎಂದು ಹೇಳಿದ್ದಾರೆ. ಬಿಗ್ ಬಾಸ್ ನನಗೆ ಒಂದು ಅದ್ಭುತ ಹಾಗೂ ಅವಿಸ್ಮರಣಿಯ ಪಯಣವಾಗಿತ್ತು. ಸಾಧ್ಯವಾದಷ್ಟು ಮಟ್ಟಿಗೆ ಶೋಗೆ ನ್ಯಾಯ ಒದಗಿಸಿ ನಿಮ್ಮನ್ನು ರಂಜಿಸಿದ್ದೇನೆ. ಇನ್ನೂ ಮುಂದೆಯೂ ರಂಜಿಸುತ್ತೇನೆ. ಅವಕಾಶ ಕೊಟ್ಟಿದ್ದ ಕಲರ್ಸ್ ಕನ್ನಡಕ್ಕೂ ನಾನು ಋಣಿಯಾಗಿದ್ದೇನೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

- Advertisement -

Latest News

error: Content is protected !!