Wednesday, June 3, 2026
Homeಕರಾವಳಿಮಂಗಳೂರು; ಎರಡೂವರೆ ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿದಾತನನ್ನು ಎರಡೂವರೆ ಗಂಟೆಯಲ್ಲಿ ಬಂಧಿಸಿದ ಪೊಲೀಸರು

ಮಂಗಳೂರು; ಎರಡೂವರೆ ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿದಾತನನ್ನು ಎರಡೂವರೆ ಗಂಟೆಯಲ್ಲಿ ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು; ಎರಡೂವರೆ ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿದಾತನನ್ನು ಎರಡೂವರೆ ಗಂಟೆಯಲ್ಲಿ ಪೊಲೀಸರು ಬಂಧಿಸಿದ ಅಚ್ಚರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸರ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೇರಳದ ಅನೀಶ್ ಕುಮಾರ್ ಬಂಧಿತ ಆರೋಪಿ.


ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಅಗಸ್ಟ್ 31 ರಂದು ಸಂಜೆ ವೇಳೆಗೆ ಎರಡೂವರೆ ವರ್ಷದ ಮಗುವನ್ನು ಅಪಹರಣ ಮಾಡಲಾಗಿದೆ ಎಂದು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿ ಮಗುವಿನೊಂದಿಗೆ ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿರುವುದಾಗಿ ಮಾಹಿತಿ ಸಿಕ್ಕಿತ್ತು. ಕಾಸರಗೋಡು ಪೊಲೀಸರ ಸಹಾಯದೊಂದಿಗೆ ಅಂತರಾರಾಜ್ಯ ಆರೋಪಿಯನ್ನು ಅರೆಸ್ಟ್ ಮಾಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ.

ಆರೋಪಿ ಅನೀಶ್ ಕುಮಾರ್  ತನ್ನ ಊರಿನಿಂದ ದಿನಾಂಕ: 28-08-2024 ರಂದು ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ರೈಲಿನಲ್ಲಿ ಹೋಗಿದ್ದು, ಗೋವಾದಲ್ಲಿ ರೈಲಿನಿಂದ ಇಳಿದು ಈತನು ಮುಂಬೈ ರೈಲನ್ನು ತಪ್ಪಿಸಿಕೊಂಡಿದ್ದಾನೆ. ಬಳಿಕ  31-08-2024 ರಂದು ಗೋವಾದಿಂದ ಹೊರಟು ಮಂಗಳೂರಿಗೆ ಬಂದು, ಪಡೀಲ್ ಅಳಪೆಯ ಅರಣ್ಯ ಭವನದ ಮುಂಭಾಗದಲ್ಲಿ ಒಂದು ಹೆಣ್ಣು ಮಗು ನಡೆದುಕೊಂಡು ಹೋಗುತ್ತಿದ್ದನ್ನು ನೋಡಿ, ತನಗೆ ಹೆಣ್ಣು ಮಕ್ಕಳಿಲ್ಲವೆಂದು ಆಸೆಯಿಂದ ಈ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಆರೋಪಿ ಬಳಿಕ  ಮಂಗಳೂರು ಜಂಕ್ಷನ್ ನ ರೈಲು ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೋಗುವ ರೈಲಿನಲ್ಲಿ ಹೋಗಿದ್ದಾನೆ. ಈ ಬಗ್ಗೆ  ಮಾಹಿತಿಯನ್ನು ತಿಳಿದುಕೊಂಡು, ಕಾಸರಗೋಡಿನ ರೈಲ್ವೇ ಪೊಲೀಸರಿಗೆ ಮಾಹಿತಿಯನ್ನು ನೀಡಿ, ತಕ್ಷಣ ಕಾರ್ಯ ಪ್ರವೃತ್ತರಾಗಿ ಕಂಕನಾಡಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳ ಮಾರ್ಗದರ್ಶನದಂತೆ ಪಿ.ಎಸ್.ಐ ಶಿವಕುಮಾರ.ಕೆ ಮತ್ತು ತಂಡವು ಕಾಸರಗೋಡಿಗೆ ತೆರಳಿ ಕಾಸರಗೋಡಿನ ರೈಲ್ವೇ ಪೊಲೀಸರ ಸಹಾಯದೊಂದಿಗೆ ಆರೋಪಿತನನ್ನು ಹಾಗೂ ಮಗುವನ್ನು ವಶಕ್ಕೆ ಪಡೆದುಕೊಂಡು ಮಗುವಿನ ತಂದೆ ತಾಯಿಗೆ ನೀಡಿದ್ದಾರೆ. ಸದ್ಯ ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!