Thursday, June 4, 2026
Homeಅಪರಾಧಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಕೊಲೆ; ಪತ್ನಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ...

ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಕೊಲೆ; ಪತ್ನಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಪಾಪಿ ಗಂಡ

- Advertisement -
- Advertisement -

ಮುಂಬೈ:  ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಎಂಬ ಗ್ರಾಮದಲ್ಲಿ ಮಹಿಳೆಯೊಬ್ಬಳುಮೂ ರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ಮೈನಾ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಕುಂಡ್ಲಿಕ್ ಉತ್ತಮ್ ಕಾಳೆ (32) ಎನ್ನಲಾಗಿದೆ.

ಘಟನೆಯ ವಿವರ: ಮೈನಾ ಅವರು ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಇದರಿಂದ ಕೋಪಗೊಂದ ಆಕೆಯ ಗಂಡ ಯಾವಾಗಲೂ ಆಕೆಯನ್ನು ನಿಂದಿಸುತ್ತಿದ್ದ. ಈ ವಿಷಯವಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಮೈನಾ ಅವರ ಸಹೋದರಿ ಆರೋಪಿಸಿದ್ದಾರೆ. ಗುರುವಾರ ರಾತ್ರಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ನಂತರದಲ್ಲಿ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ಆಕೆ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಹೋಗಿದ್ದಾಳೆ. ಜನರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ.

ಪೊಲೀಸರು ಕೊಲೆ ಆರೋಪಿಯಾದ ಪತಿ ಕಾಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!