Saturday, June 6, 2026
Homeಅಪರಾಧಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯ ಹತ್ಯೆ!: ಕೋವಿ, ಮಾಂಸ ಸ್ವಾಧೀನ ಪಡಿಸಿಕೊಂಡ ಅರಣ್ಯಾಧಿಕಾರಿಗಳು

ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯ ಹತ್ಯೆ!: ಕೋವಿ, ಮಾಂಸ ಸ್ವಾಧೀನ ಪಡಿಸಿಕೊಂಡ ಅರಣ್ಯಾಧಿಕಾರಿಗಳು

- Advertisement -
- Advertisement -

ಉಪ್ಪಿನಂಗಡಿ: ಶಿರಾಡಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದು ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಿದ್ದು ಈ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ.

ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದವರು ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ಎಂದು ತಿಳಿದು ಬಂದಿದೆ. ಅವರು ತಮ್ಮ ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತಂತೆ ಮಾಹಿತಿಯನ್ನು ಪಡೆದಿದ್ದ ಅರಣ್ಯಾಧಿಕಾರಿಗಳು, ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್‌, ಶಿವಾನಂದ ಅ‌ವರ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಅರಣ್ಯಾಧಿಕಾರಿಗಳು ನಡೆಸಿದಂತಹ ಈ ಕಾರ್ಯಾಚರಣೆಯಲ್ಲಿ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!