Monday, May 20, 2024
Homeಕರಾವಳಿಬಂಟ್ವಾಳ: 5.40 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: 5.40 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಗೆ ಶಿಲಾನ್ಯಾಸ

spot_img
- Advertisement -
- Advertisement -

ಬಂಟ್ವಾಳ: ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದ ಕಳಸಡ್ಕ ಎಂಬಲ್ಲಿ 5.40 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿ ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು , ಎರಡು ತಾಲೂಕು ನ್ನು ಸಂಪರ್ಕ ಮಾಡುವ ಕಿಂಡಿ ಅಣೆಕಟ್ಟು ಹಾಗೂ ಸಂಪರ್ಕ ಸೇತುವೆ ಈ ಭಾಗದ ಕೃಷಿಕರ 40 ವರ್ಷಗಳ ಬೇಡಿಕೆಯಾಗಿದ್ದು ಸದ್ಯ ಈಡೇರಿದೆ ಎಂಬ ಸಂತೋಷ ನಮಗಿದೆ . ಈ ಭಾಗದ ಜನರ ಸಹಕಾರ ಸಿಕ್ಕಿದರೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಸುಲಭವಾಗುತ್ತದೆ .

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ , ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ , ಕಾರ್ಯದರ್ಶಿ ಡೊಂಬಯ್ಯ ಅರಳ , ನಗರ ನೀರು ಸರಬರಾಜು ಹಾಗೂ ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್ , ಗ್ರಾಮ ಪಂಚಾಯತ್ ಸದಸ್ಯರು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಶಿವಪ್ರಸನ್ನ , ಗುತ್ತಿಗೆದಾರ ರಾಜೇಶ್ ಕಾರಂತ ಮತ್ತಿತರರು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!