- Advertisement -
- Advertisement -
ಗುಂಡ್ಯ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಎಲಿಮಲೆಯ ಯುವಕ ಕಿಶನ್ ಮಾವಿನಕಟ್ಟೆ (22) ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಲಿಮಲೆ ನಿವಾಸಿಗಳಾದ ಕಿಶನ್ ಮತ್ತು ಹರ್ಷಿತ್ ಪ್ರಯಾಣಿಸುತ್ತಿದ್ದ ಕಾರು ಹಾಗೂ ಲಾರಿ ನಡುವೆ ಗುಂಡ್ಯ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಕಳೆದ ಎರಡು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಕಿಶನ್ ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಹರ್ಷಿತ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಭರವಸೆಯ ಯುವಕನ ಅಕಾಲಿಕ ಮರಣಕ್ಕೆ ಎಲಿಮಲೆ ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ತೀವ್ರ ಶೋಕ ವ್ಯಕ್ತವಾಗಿದ್ದು, ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
- Advertisement -


