- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಕಚೇರಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಕಿಶೋರ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಭಾಗಿಯಾಗಿದ್ದರು.
ಪುತ್ತೂರಿನ ಐವತ್ತಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದರು.ಅಕ್ಟೋಬರ್ 21 ರಂದು ನಡೆದಿದ್ದ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದರು.
- Advertisement -