Tuesday, May 7, 2024
Homeಉದ್ಯಮಕೋವಿಡ್ ಹಿನ್ನೆಲೆ: ಕೊಡಗು ಪ್ರವಾಸೋದ್ಯಮದಲ್ಲಿ ಮತ್ತಷ್ಟು ಕಠಿಣ ನಿಯಮ!

ಕೋವಿಡ್ ಹಿನ್ನೆಲೆ: ಕೊಡಗು ಪ್ರವಾಸೋದ್ಯಮದಲ್ಲಿ ಮತ್ತಷ್ಟು ಕಠಿಣ ನಿಯಮ!

spot_img
- Advertisement -
- Advertisement -

ಮಡಿಕೇರಿ: ಕೊರೋನಾ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಕೊಡಗು‌‌ ಪ್ರವಾಸೋದ್ಯಮದಲ್ಲಿ ಮತ್ತಷ್ಟು ಕಠಿಣ ನಿಯಮ‌ ಜಾರಿಗೊಳಿಸಲಾಗಿದೆ.‌ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಇಡೀ ಜಿಲ್ಲೆಯಲ್ಲಿ ಹೋಟೆಲ್, ಹೋಮ್ ಸ್ಟೇ, ರೆಸಾರ್ಟ್‌ ಮತ್ತು ಅತಿಥಿ ಗೃಹಗಳಲ್ಲಿ ತಂಗಲು ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕಠಿಣ ನಿಯಮಗಳನ್ನು ಜಾರಿಗೊಳಿಸಿ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದ್ದು, 72 ಗಂಟೆಗಳ ಒಳಗಿನ ವರದಿ ತರುವಂತೆ ಸೂಚನೆ‌ ನೀಡಲಾಗಿದೆ.

ಇನ್ನು ನೆರೆಯ ಕೇರಳದಲ್ಲಿ ಸೋಂಕು ಹೆಚ್ಚಳವಾಗಿರುವ ಕಾರಣ ಜಿಲ್ಲೆ ಪ್ರವೇಶಿಸುವ ಮಾರ್ಗಗಳಲ್ಲಿ ಸ್ಥಾಪಿಸಲಾಗಿರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗಿದೆ.

- Advertisement -
spot_img

Latest News

error: Content is protected !!