Friday, June 5, 2026
Homeತಾಜಾ ಸುದ್ದಿಇಂದು ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಸ್ತಬ್ಧ

ಇಂದು ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಸ್ತಬ್ಧ

- Advertisement -
- Advertisement -

ಮಡಿಕೇರಿ: ಕೊರೊನಾ ಸೋಂಕು ಮುನ್ನೆಚ್ಚರಿಕೆ ಹಿನ್ನೆಲೆ ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.

ಜಿಲ್ಲೆಗೆ ವೀಕೆಂಡ್ ಸಂದರ್ಭದಲ್ಲಿ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ ಡೌನ್ ಮಾಡಲಾಗುವುದು , ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ತರಕಾರಿ, ಮೆಡಿಕಲ್ ಶಾಪ್‍ಗಳು, ಪೆಟ್ರೋಲ್ ಬಂಕ್‍ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು ಸರ್ಕಾರಿ ಆಹಾರ ಮಳಿಗೆಗಳಿಗೆ ಮಾತ್ರ ವಿನಾಯಿತಿ ಕೊಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಸಾರಿಗೆ ಸ್ತಬ್ಧವಾಗಲಿದ್ದು, ಮೆಡಿಕಲ್, ಆಸ್ಪತ್ರೆ ಒಳಗೊಂಡಂತೆ ತುರ್ತು ಸೇವೆಗಳಿಗೆ ಮಾತ್ರ ಆಟೋ ಇತ್ಯಾದಿ ವಾಹನಗಳನ್ನು ಬಳಸಬಹುದು ಎಂದು ಅನೀಸ್ ಕೆ.ಜಾಯ್ ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!