Thursday, June 4, 2026
Homeತಾಜಾ ಸುದ್ದಿಕೊರೊನಾದಿಂದ ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ: ಕೋಡಿಹಳ್ಳಿ ಮಠದ ಶ್ರೀ ಶಿವಾನಂದ ಶಿವಯೋಗಿ...

ಕೊರೊನಾದಿಂದ ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ: ಕೋಡಿಹಳ್ಳಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ

- Advertisement -
- Advertisement -

ಬೆಂಗಳೂರು: ಎರಡು ವರ್ಷಗಳಿಂದ ಜನರನ್ನು ಕಾಡಿದ್ದ ಕೊರೊನಾ ವೈರಸ್ ಇನ್ನೂ ಒಂದೂವರೆ ವರ್ಷ ಜನರನ್ನು ಕಾಡಲಿದ್ದು, ಹೋಗುವಾಗ ಹೆಚ್ಚು ಕಾಟ ಕೊಟ್ಟು ಹೋಗುತ್ತದೆ ಎಂದು ಕೋಡಿಹಳ್ಳಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಭಾನುವಾರ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಸುನೀಲ್ ರಾವೂರ್ ಅವರ ಮನೆಗೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊರೊನಾ ಒಂದೂವರೆ ವರ್ಷದಲ್ಲಿ ಹೋಗುತ್ತೆ. ಆದರೆ ಹೋಗುವಾಗ ತುಂಬಾ ಕಷ್ಟ ಕೊಟ್ಟು ಹೋಗುತ್ತೆ. ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ. ಅಷ್ಟೊಂದು ನೋವನ್ನು ಕೊಡುತ್ತೆ ಎಂದು ಶ್ರೀಗಳು ತಿಳಿಸಿದ್ದಾರೆ.

ಕೋವಿಡ್ ವಿಶೇಷವೇನೆಂದರೆ, ಮನುಷ್ಯ ಕಷ್ಟ ಬಂದಾಗ ದೇವರು, ಧರ್ಮ ಅಂತಾನೆ ಮತ್ತು ಪ್ರಾರ್ಥನೆ ಮಾಡ್ತಾನೆ. ಕೋವಿಡ್ ನೇರವಾಗಿ ಬಂದು ದೇವರನ್ನೇ ಹಿಡಿದುಕೊಂಡು, ದೇವಸ್ಥಾನಗಳ ಬಾಗಿಲು ಹಾಕಿಸಿತು. ಆಮೇಲೆ ಜನರ ಮೇಲೆ ಬಂತು, ನೀರಿನ ಮೇಲೆ, ಭೂಮಿ ಮೇಲೆ ಬಂತು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!