Wednesday, December 6, 2023
Homeತಾಜಾ ಸುದ್ದಿರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

- Advertisement -
- Advertisement -

ಹುಬ್ಬಳ್ಳಿ: ಸ್ಫೋಟಕ ಭವಿಷ್ಯಗಳಿಂದಲೇ ಸುದ್ದಿಯಾಗುತ್ತಿರುವ ಕೋಡಿಮಠದ ಶ್ರೀಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯದ ಮೂಲಕ ಸುದ್ದಿಯಾಗಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ  ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂದಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಂತ ಅವರು, ಈ ವರ್ಷವೂ ಮಳೆಗೂ ತೊಂದರೆ ಇಲ್ಲ. ಅನ್ನಕ್ಕೂ ಕೊರತೆಯಿಲ್ಲ. ದೇಶ, ರಾಜ್ಯದಲ್ಲಿ ವಿಪರೀತ ಮಳೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದರು.ಮಳೆಗೆ ಯಾವುದೇ ತೊಂದರೆ ಇಲ್ಲ. ಮೊನ್ನೆ ಬಂದ ರೀತಿಯೇ ಇನ್ನೂ ಭಾರೀ ಮಳೆ ಬರಲಿದೆ. ಗುಡುಗು ಸಹಿತ ಮಳೆಯಿಂದ ಅಪಮೃತ್ಯು ಉಂಟಾಗಲಿದೆ. ಪ್ರಕೃತಿಯಿಂದಲೂ ಬಹಳ ಹಾನಿಯಾಗಲಿದೆ ಎಂದು ಹೇಳಿದ್ದರು.

ಇನ್ನೂ ರಾಜ್ಯ ಸರ್ಕಾರದ ಕುರಿತಂತೆ ಮಾತನಾಡಿದಂತ ಅವರು, ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ. ಆದರೇ ಏನೂ ಆಗೋದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ. ಆನಂದ ಪಡುವವರಿಲ್ಲ. ಜೊತೆಗೆ ರಾಜ್ಯ ಸರ್ಕಾರಕ್ಕೆ ಏನೂ ತೊಂದರೆ ಆಗೋದಿಲ್ಲ. ಇದನ್ನು ಬಿಟ್ಟು ನಾನು ಏನೂ ಹೇಳಲ್ಲ. ನನಗೆ ಎಲ್ಲರೂ ಬೇಕಾಗಿರೋರು ಎಂದು ಹೇಳಿದರು. ಇದೀಗ ಇಂದು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಯುಗಾದಿ ವೇಳೆಗೆ ಅಸ್ಥಿರತೆ ಕಾಡಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯವನ್ನು ಕೋಡಿಮಠ ಶ್ರೀಗಳು ನುಡಿದಿದ್ದಾರೆ.

- Advertisement -
spot_img

Latest News

error: Content is protected !!