Friday, June 5, 2026
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ: ದೇವಿ ಸನ್ನಿಧಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ: ದೇವಿ ಸನ್ನಿಧಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

- Advertisement -
- Advertisement -

ಉಡುಪಿ: ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯದಶಮಿ ಹಿನ್ನೆಲೆಯಲ್ಲಿ ಭಕ್ತಸಾಗರವೇ ಹರಿದುಬರ್ತಿದೆ. ಮೂಕಾಂಬಿಕಾ ಕ್ಷೇತ್ರದಲ್ಲಿ ಅಕ್ಷರಭ್ಯಾಸ ಸಂಪನ್ನಗೊಂಡಿದೆ.

ಚಿಕ್ಕ ಮಕ್ಕಳಿಗೆ ಇಲ್ಲಿನ ಸರಸ್ವತಿ ಗುಡಿ ಮುಂದೆ ವಿದ್ಯಾರಂಭ ಮಾಡಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಎನ್ನುವ ನಂಬಿಕೆ ಇದೆ. ದೇವರ ಸನ್ನಿಧಿಯಲ್ಲಿ ಮಗುವಿಗೆ ವಿದ್ಯಾದೇವತೆ ಸರಸ್ವತಿ ಹೆಸರನ್ನು ಅಕ್ಕಿಯಲ್ಲಿ ಬರೆಯುವ ಮೂಲಕ ಅಕ್ಷರಭ್ಯಾಸ ನಡೆಯುತ್ತೆ. ಸಾವಿರಾರು ಭಕ್ತರು ದೇವಿ ಸನ್ನಿಧಾನದಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ನಡೆಸಿದರು. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ವಿಜಯದಶಮಿಗೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಈ ಹಿನ್ನಲೆ ಈ ಬಾರಿ ದೇವಾಲಯಕ್ಕೆ ಕೇರಳ ಸೇರಿದಂತೆ ದಕ್ಷಿಣ ಭಾರತದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

- Advertisement -

Latest News

error: Content is protected !!