Friday, November 13, 2026
Homeಕರಾವಳಿಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ; ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ; ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

- Advertisement -
- Advertisement -

ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಒಪ್ಪಿಗೆ ಅಗತ್ಯವಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನಾಲ್ಕೂ ರಾಜ್ಯಗಳ ಮುಖ್ಯಮಂತ್ರಿಗಳ ಒಪ್ಪಿಗೆ ದೊರೆತ ಬಳಿಕ ವಿಲೀನ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.

ಮಂಗಳೂರು-ಬೆಂಗಳೂರು ರೈಲು ಮಾರ್ಗದ ದ್ವಿಪಥ ಕಾಮಗಾರಿಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದು, DPR ಸಿದ್ಧಪಡಿಸಲಾಗುತ್ತಿದೆ. ಘಾಟ್ ಪ್ರದೇಶದಲ್ಲಿ ಕಡಿಮೆ ಏರು-ಇಳಿಜಾರು ಹೊಂದಿರುವ ಹೊಸ ಮಾರ್ಗದ ವಿನ್ಯಾಸ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಸಂಚಾರ ಶುಕ್ರವಾರದಿಂದಲೇ ಆರಂಭವಾಗಲಿದೆ. ಅಲ್ಲದೆ, ಕರ್ನಾಟಕದಲ್ಲಿ ಸುಮಾರು 75 ಸಾವಿರ ಕೋಟಿ ರೂ. ಮೊತ್ತದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಕರ್ನಾಟಕಕ್ಕೆ ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂಬ ಎಂ.ಬಿ. ಪಾಟೀಲ್ ಆರೋಪವನ್ನು ತಳ್ಳಿಹಾಕಿದ ಅವರು, ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

- Advertisement -

Latest News

error: Content is protected !!