ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ದಿವಂಗತ ಕೊಂಕಣಿ ಸಾಂಸ್ಕೃತಿಕ ಐಕಾನ್ ಎರಿಕ್ ಒಝೇರಿಯೊ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 4 ರ ಗುರುವಾರದಂದು ಬೆಂದೂರ್ ಮಿನಿ ಹಾಲ್‌ನಲ್ಲಿ ಆಯೋಜಿಸಿತ್ತು.
ಈ ಕಾರ್ಯಕ್ರಮದಲ್ಲಿ ಸೇರಿದವರು ಕೊಂಕಣಿ ಸಂಗೀತ, ಭಾಷೆ ಮತ್ತು ಗುರುತಿಗೆ ಒಝೇರಿಯೊ ಅವರ ಜೀವಮಾನದ ಸೇವೆಯನ್ನು ಪ್ರೀತಿಯಿಂದ ಸ್ಮರಿಸಿದರು. ಎರಿಕ್‌ರವರ ಪತ್ನಿ ಜೊಯ್ಸ್, ಒಝೇರಿಯೊ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿಅಕಾಡೆಮಿ ಅಧ್ಯಕ್ಷ ಜೋಕಿಂ Stany Alvares, ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಒಝೇರಿಯೊ ಮಗಳು ಡಾ ರಶ್ಮಿ, ಅಳಿಯ ಸಂಗೀತಗಾರ ಆಲ್ವಿನ್ ಫೆರ್ನಾಂಡಿಸ್, ಮೊಮ್ಮಕ್ಕಳಾದ ಅಮನ್, ಜಿಯಾ ಹಾಗೂ ಅಕಾಡಮಿ ಅಧ್ಯಕ್ಷರು, ಸದಸ್ಯರಾದ Navin Lobo Bajal , Ronald Crasta , Akshatha Nayak Kadeshivalaya , ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಪಿಂಟೊ, ಮಂಗಳೂರು ಧರ್ಮಪ್ರಾಂತ್ಯದ ಪಿಆರ್‌ಒ ರೊಯ್ ಕ್ಯಾಸ್ತೆಲಿನೊ, ಕೊಂಕಣಿ ಲೇಖಕರ ಒಕ್ಕೂಟದ ಮುಖ್ಯಸ್ಥ ರಿಚ್ಚಾರ್ಡ್ ಮೊರಾಸ್, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ Appi S , ಪ್ರಮುಖ ಭಾಷಣಕಾರರು, ಲೇಖಕರು, ಸಂಘಟಕರು ಮತ್ತು ಅಭಿಮಾನಿಗಳು ಪುಷ್ಪಾರ್ಚನೆ ಮಾಡಿದರು.


