Sunday, May 19, 2024
Homeತಾಜಾ ಸುದ್ದಿಬೆಳ್ತಂಗಡಿ: ಕೂಕ್ರಬೆಟ್ಟು ಶಾಲೆಯಲ್ಲಿ 26ರಂದು ₹92 ಲಕ್ಷ ವೆಚ್ಚದ ಸುಸಜ್ಜಿತ ಕಟ್ಟಡ ಶಿಲಾನ್ಯಾಸ

ಬೆಳ್ತಂಗಡಿ: ಕೂಕ್ರಬೆಟ್ಟು ಶಾಲೆಯಲ್ಲಿ 26ರಂದು ₹92 ಲಕ್ಷ ವೆಚ್ಚದ ಸುಸಜ್ಜಿತ ಕಟ್ಟಡ ಶಿಲಾನ್ಯಾಸ

spot_img
- Advertisement -
- Advertisement -

ಬೆಳ್ತಂಗಡಿ: ‘ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಸರ್ಕಾರದಿಂದ ₹ 92 ಲಕ್ಷ ಅನುದಾನ ಮಂಜೂರಾಗಿದ್ದು, ಅದರ ಶಿಲಾನ್ಯಾಸ ಕಾರ್ಯಕ್ರಮ ಫೆ.26ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಎಂದು ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಹೇಳಿದರು.

ಶಿಲಾನ್ಯಾಸ ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ಬುಧವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘2019ರಲ್ಲಿ ಶಾಲೆಯಲ್ಲಿ ಕೇವಲ 16 ಮಕ್ಕಳಿದ್ದು, ಮುಚ್ಚುವ ಹಂತಕ್ಕೆ ತಲುಪಿತ್ತು. ಇದೀಗ ಎಲ್ಲರ ಪ್ರಯತ್ನದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ 122ಕ್ಕೆ ಏರಿಕೆಯಾಗಿದೆ. ಶಾಲೆಗೆ ಸುಸಜ್ಜಿತ ಕಟ್ಟಡ ಅಗತ್ಯವಿದ್ದ ಕಾರಣ ಶಾಸಕರು ಅನುದಾನ ಮಂಜೂರು ಮಾಡಿದ್ದಾರೆ. ಶಾಸಕ ಹರೀಶ್‌ ಪೂಂಜ ಶಿಲಾನ್ಯಾಸ ನೆರವೇರಿಸುವರು. ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್‌ ಅಂಚನ್‌, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ದೇರಾಜೆಬೆಟ್ಟ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಹೇಮರಾಜ್‌ ಬೆಳ್ಳಿಬೀಡು, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್‌.ಎಸ್‌, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶವಂತ ಎಸ್‌, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಶ್ರೀ ಜೈನ್‌ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಯಶೋಧರ ಬಂಗೇರ, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಶ್ರೀ ಜೈನ್‌, ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣಾನ್‌, ಅಶೋಕ್‌ ಪೂಜಾರಿ, ಶುಭರಾಜ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಶ್‌ ಮರೋಡಿ, ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕಾರ್ಯದರ್ಶಿ ನಾರಾಯಣ ಪೂಜಾರಿ, ಎಸ್‌ಡಿಎಂಸಿ ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ ಇದ್ದರು. ವಿವಿಧ ಸಮಿತಿಗಳ ಪದಾಧಿಕಾರಿಗಳು, ಪೋಷಕರು ಇದ್ದರು. ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹಶಿಕ್ಷಕಿ ಹರ್ಷಲಾ ವಂದಿಸಿದರು.

- Advertisement -
spot_img

Latest News

error: Content is protected !!