Tuesday, June 18, 2024
Homeತಾಜಾ ಸುದ್ದಿಆರ್ಥಿಕ ಸಂಕಷ್ಟ: ಜಿಮ್ ಸೆಂಟರ್ ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

ಆರ್ಥಿಕ ಸಂಕಷ್ಟ: ಜಿಮ್ ಸೆಂಟರ್ ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

spot_img
- Advertisement -
- Advertisement -

ಚಿಕ್ಕಮಗಳೂರು: ಲಾಕ್ ಡೌನ್ ನಿಂದ ಉಂಟಾದ ಆರ್ಥಕ ಸಂಕಷ್ಟ ಎದುರಿಸಲಾಗದೇ ಜಿಮ್ ಟ್ರೈನರ್ ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಜಯಪುರ ಸಮೀಪದ ದೂಬ್ಳ ಗ್ರಾಮದ 26 ವರ್ಷದ ಸುನೀಲ್ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್.

ಜಯಪುರದಲ್ಲಿ ಜಿಮ್ ನಲ್ಲಿ ಸುಮಾರು 30ರಿಂದ 40 ಮಂದಿಗೆ ತರಬೇತಿ ನೀಡುತ್ತಿದ್ದ ಸುನೀಲ್ ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಜಿಮ್ ಕ್ಲೋಸ್ ಮಾಡಲಾಗಿತ್ತು. ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಸುನೀಲ್ ಕಳೆದ ಮೂರು ತಿಂಗಳಿಂದ ಆಟೋ ಓಡಿಸುತ್ತಿದ್ದರು. ಆದರೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಸುನೀಲ್ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

ಜಿಮ್ ಟ್ರೈನರ್ ಸುನಿಲ್ ಆರೋಗ್ಯವಾಗಿ ಕಟ್ಟುಮಸ್ತಾಗಿದ್ದ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದನು. ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಮಿಸ್ಟರ್ ಕೊಪ್ಪ ಎಂಬ ಕೀರ್ತಿಗೂ ಪಾತ್ರನಾಗಿದ್ದನು. ಇದೀಗ 26ನೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾಗಿರೋದು ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ. ಘಟನೆ ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!