- Advertisement -
- Advertisement -
ಕುಂದಾಪುರ: ಖೋಟಾ ನೋಟು ಪ್ರಕರಣದಲ್ಲಿ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹಮದ್ ಹನೀಫ್ ಬಂಧಿತ ಆರೋಪಿ. 1999ರಲ್ಲಿ ಜೈಲಿನಿಂದ ಬಿಡುಗಡೆ ಹೊಂದಿ ಸುಮಾರು 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈ ಪ್ರಕರಣದಲ್ಲಿ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಮಂಗಳವಾರ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ನೂತನ್ ಡಿ ಮತ್ತು ಸಿಬ್ಬಂದಿ ಹೆಚ್ ಸಿ ರಾಜು, ಹೆಚ್ ಸಿ ಅಶೋಕ್ ಶೆಟ್ಟಿಯವರ ತಂಡ ಆರೋಪಿಯನ್ನು ಕೇರಳದ ಕಾಸರಗೋಡಿನಿಂದ ಪತ್ತೆ ಹಚ್ಚಿ ನ್ಯಾಯಲಯದ ಮುಂದೆ ಹಾಜರು ಪಡಿಸಿದ್ದಾರೆ.
- Advertisement -