Wednesday, June 24, 2026
Homeಕರಾವಳಿಉಡುಪಿಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು‌.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ನಿವಾಸದಲ್ಲಿ ಭೇಟಿ ಮಾಡಿದ ಶ್ರೀನಿವಾಸ ಪೂಜಾರಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಧನ್ಯವಾದ ತಿಳಿಸಿದರು.

ಈ ವೇಳೆ ಸಂಸದರಾಗಿ ಆಯ್ಕೆಯಾಗಿದ್ದಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದರು.

ನಾಳೆ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಸಂಜೆ ದೆಹಲಿಗೆ ತೆರಳಿದ್ದಾರೆ.

- Advertisement -

Latest News

error: Content is protected !!