Sunday, June 7, 2026
Homeಕರಾವಳಿಮಂಗಳೂರು: ಪರಿಷತ್ ಚುನಾವಣೆಗೆ ದ.ಕ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್...!

ಮಂಗಳೂರು: ಪರಿಷತ್ ಚುನಾವಣೆಗೆ ದ.ಕ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್…!

- Advertisement -
- Advertisement -

ಮಂಗಳೂರು: ಪರಿಷತ್ ಚುನಾವಣೆಗೆ ದ.ಕ. ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು ಪಡೆದುಕೊಳ್ಳಲಿದ್ದಾರೆ ಎನ್ನುವ ಲೆಕ್ಕಾಚಾರಗಳಿತ್ತು. ಅಲ್ಲದೆ, ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ, ಬೊಮ್ಮಾಯಿ ಸಂಪುಟದಲ್ಲೂ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನೊಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಸದ್ಯ ಇದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮುಂದಿನ ಆಯ್ಕೆಯೂ ಕೂಡ ಇದಕ್ಕೆ ಹೊಂದಿಕೊಂಡಿರಲಿದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!