Thursday, June 4, 2026
Homeಕರಾವಳಿಉಡುಪಿಮಾಜಿ ಪ್ರಧಾನಿ ದೇವೇಗೌಡ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

ಮಾಜಿ ಪ್ರಧಾನಿ ದೇವೇಗೌಡ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಇಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ, ಶಾಲು ಹೊದಿಸಿ ಗೌರವಿಸಿ ಆಶೀರ್ವಾದ ಪಡೆದರು.ದೇವೇಗೌಡರ ಕಾಲಿಗೆ ಬಿದ್ದು ನಮಸ್ಕರಿಸಿದ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದರು‌.

ಇದೇ ವೇಳೆ ಚುನಾವಣೆಯಲ್ಲಿ ಗೆದ್ದು ಬರುವಂತೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ದೇವೇಗೌಡರು ಹಾರೈಸಿದರು‌.ನಿನ್ನೆ ಸಂಜೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೂ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದರು.

- Advertisement -

Latest News

error: Content is protected !!