Wednesday, June 3, 2026
Homeಕರಾವಳಿಉಡುಪಿವಿಧಾನ ಪರಿಷತ್ ಸದಸ್ವತ್ವಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ವಿಧಾನ ಪರಿಷತ್ ಸದಸ್ವತ್ವಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

- Advertisement -
- Advertisement -

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಕಚೇರಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ ಸಲ್ಲಿದ್ದಾರೆ‌.

ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ವಿಪಕ್ಷ ನಾಯಕರೂ ಆಗಿದ್ದರು‌.

ಇದೀಗ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ.

- Advertisement -

Latest News

error: Content is protected !!