Saturday, May 18, 2024
HomeUncategorizedಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಕೊರತೆ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಕೊರತೆ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

spot_img
- Advertisement -
- Advertisement -

ಉಡುಪಿ: ಸಿಎನ್ ಜಿ ಕೊರತೆಯಿಂದಾಗಿ ಉಡುಪಿ, ಕುಂದಾಪುರ, ಬೈಂದೂರು ಮೊದಲಾದ ಪ್ರದೇಶಗಳಲ್ಲಿ ಸಿ ಎನ್ ಜಿ ಬಂಕ್ ಗಳ ಮುಂದೆ ವಾಹನಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟಕ್ಕೆ ಈಡಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಇಲಾಖೆ ಸಚಿವ ಹರದೀಪ್ ಸಿಂಗ್ ಪುರಿ ಅವರಿಗೆ ಕೂಡಲೇ ಮಧ್ಯೆ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಇ-ಮೇಲ್ ಮೂಲಕ ಪತ್ರ ಬರೆದು ವಿನಂತಿ ಮಾಡಿಕೊಂಡಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರು ಸಮಸ್ಯೆ ಸಂಬಂಧ ಹೆಚ್ಚುವರಿ ಸಿಎನ್ ಜಿ ಪೂರೈಸಲು ಒಪ್ಪಿದ್ದಾರೆ ಎಂದು ಹೇಳಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಗ್ಯಾಸ್ ನ ಸರಬರಾಜು ಜವಾಬ್ದಾರಿ ಅದಾನಿ ಸಂಸ್ಥೆಯದ್ದಾಗಿದ್ದು, ತಾಂತ್ರಿಕ ತೊಂದರೆಯಿಂದ ಮತ್ತು ಹೆಚ್ಚುವರಿ ಬೇಡಿಕೆಯಿಂದಾಗಿ ಒಂದಷ್ಟು ಸಮಸ್ಯೆ ಆಗಿದೆ ಎಂದು ಸಂಸ್ಥೆ ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ.

ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಅದಾನಿ ಸಂಸ್ಥೆಯ ಮೂಲಕ ಸಿಎನ್ ಜಿ ಬಂಕ್ ನಿರ್ಮಿಸಲು ಕೂಡಾ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!