Thursday, June 4, 2026
Homeಕರಾವಳಿಉಡುಪಿಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಹಾಕುತ್ತೇವೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ವಿಚಾರ;...

ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಹಾಕುತ್ತೇವೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ವಿಚಾರ; ಎಂ ಬಿ ಪಾಟೀಲ್ ಗೆ ತಿರುಗೇಟು ಕೊಟ್ಟ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಉಡುಪಿ: ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಸಚಿವ ಎಂ ಬಿ ಪಾಟೀಲ್ ಹೇಳಿಕೆಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ಕೊಟ್ಟಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಹೇಳಿರುವ ಸಚಿವ ಎಂ.ಬಿ. ಪಾಟೀಲ್ ತಮ್ಮ ಹೇಳಿಕೆಯನ್ನು ಪುನರ್ ಪರಿಶೀಲನೆ ಮಾಡಬೇಕು. ಸೂಳಿಬೆಲೆ ರಾಷ್ಟ್ರಭಕ್ತರ ಸಾಲಿಗೆ ಸೇರುವವರೇ ಹೊರತು ಭಯೋತ್ಪಾದಕ ಅಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಲ್ಲಿ ರಾಷ್ಟ್ರ ಭಕ್ತಿ ಹೆಚ್ಚಿಸುವ, ರಾಷ್ಟ್ರೀಯತೆಗೆ ಒತ್ತು ಕೊಡುತ್ತಿರುವ ಸೂಳಿಬೆಲೆ ಅವರನ್ನು ವಿನಾಕಾರಣ ಜೈಲಿಗೆ ಹಾಕುತ್ತೇವೆ ಎಂಬ ಅಬ್ಬರದ ಮಾತು ಗಳನ್ನು ಪ್ರತಿಪಕ್ಷವಾಗಿ ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ. ಸೂಲಿಬೆಲೆಯನ್ನು ವಿನಾಕರಣ ಜೈಲಿಗೆ ಹಾಕುತ್ತೇವೆ ಎಂದು ಶಕ್ತಿ ಪ್ರದರ್ಶನ ಮಾಡಿದರೆ ಬಿಜೆಪಿ ತೀವ್ರ ಹೋರಾಟ ಮಾಡಿ ಅವರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡುತ್ತದೆ ಎಂದರು.

- Advertisement -

Latest News

error: Content is protected !!