Tuesday, December 5, 2023
Homeಕರಾವಳಿಉಸ್ತುವಾರಿ ಸಚಿವರಿಂದ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆ

ಉಸ್ತುವಾರಿ ಸಚಿವರಿಂದ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆ

- Advertisement -
- Advertisement -

ಮಂಗಳೂರು: ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾಹಿತಿ ನೀಡಿದರು. ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಏಪ್ರಿಲ್ 2 ರಂದು ಪ್ರಾರಂಭವಾಗಿದ್ದು, ಎರಡು ದಿನಗಳಲ್ಲಿ 61302 ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ಕರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರ ಒಟ್ಟಿಗೇ ನೀಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ನವರಿಗೆ ಪ್ರತೀ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ, ಪ್ರತೀ ಅಂತ್ಯೋದಯ ಕಾರ್ಡ್ ಗೆ 70 ಕೆ.ಜಿ. ಹಾಗೂ ಪ್ರತೀ ಏಪಿಎಲ್ ಕಾರ್ಡ್ ಗೆ 20 ಕೆ.ಜಿ.ಯಂತೆ ಅಕ್ಕಿ ವಿತರಿಸಲಾಗುತ್ತಿದೆ.

- Advertisement -
spot_img

Latest News

error: Content is protected !!