Friday, June 5, 2026
Homeಅಪರಾಧಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ; ದಾರಿಮಧ್ಯೆ ಕಾರಿನ ನಂಬರ್ ಪ್ಲೇಟ್ ಬದಲಾವಣೆ

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ; ದಾರಿಮಧ್ಯೆ ಕಾರಿನ ನಂಬರ್ ಪ್ಲೇಟ್ ಬದಲಾವಣೆ

- Advertisement -
- Advertisement -

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆಯಲ್ಲಿ ಶುಕ್ರವಾರದಂದು ನಡೆದ ಭಾರೀ ಮೊತ್ತದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ತನಿಖೆಯಲ್ಲಿ ಕಾರಿನ ನಂಬರ್ ಪ್ಲೇಟ್ ಅನ್ನು ದಾರಿ ಮಧ್ಯೆ ಬದಲಾಯಿಸಿರುವುದು ಬೆಳಕಿಗೆ ಬಂದಿದೆ.

ಕೃತ್ಯಕ್ಕ ಬಳಸಿದ ಫಿಯೆಟ್ ವಿನಿಯಾ ಕಾರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ-ಪಡುಬಿದ್ರೆ ಮಾರ್ಗವಾಗಿ ಮಂಗಳೂರಿನತ್ತ ಬಂದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಉಡುಪಿ ಬರುವ ಮುನ್ನ ಕಾರು ಬೇರೆಯೊಂದು ನಂಬರ್‌ ಪ್ಲೇಟ್ ಅನ್ನು ಹೊಂದಿರುವುದು ಟೋಲ್ ಬೂತ್ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಅದರ ಪ್ರಕಾರ ಕಾರಿನ ಮಾಲೀಕ ತಮಿಳುನಾಡು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ.

ಮಾಲೀಕನ ಪತ್ತೆಗಾಗಿ ಪೊಲೀಸರ ಒಂದು ತಂಡ ತೆರಳಿದ್ದು, ಪೊಲೀಸರ ಉಳಿದ ಎರಡು ತಂಡಗಳು ಮಹಾರಾಷ್ಟ್ರದ ಮುಂಬೈ ಹಾಗೂ ಕೇರಳಕ್ಕೆ ತೆರಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

- Advertisement -

Latest News

error: Content is protected !!